"ಪ್ರಭು, ಶಾಂಭವಿ ಮೇಡಂಗೆ ಗಂಡು ಸಿಕ್ಕಾಯ್ತು, ನೆನ್ನೆ ರಾತ್ರಿಯೇ ನಿಮಗೆ ಫೋನ್ ಮಾಡ್ಬೇಕು ಅಂತ ಅಂದ್ಕೊಂಡಿದ್ದೆ, ಒಳ್ಳೆಯದಾಯ್ತಲ್ವ, ನಂಗೆ ಖುಷಿಯಾಯ್ತು."
"ಹೌದು ಮುಕುಂದ್ ನಂಗು ಗೊತ್ತಾಯ್ತು ನಮ್ಮ ಅತ್ತಿಗೆ ಹೇಳಿದ್ರು, ಕೊನೆಗೂ ಗಂಡು ಸಿಕ್ತಲ್ಲ ಸದ್ಯ, ಮ್ಯಾಟ್ರಿಮೋನಿಯಲ್ ನಲ್ಲಿ ನೊಂದಾಯಿಸಿಕೊಂಡಿದ್ದು ಎಷ್ಟು ಒಳ್ಳೆದಾಯ್ತಲ್ವ ಅವರಿಗೆ, ಹುಡುಗಾನು ಒಳ್ಳೆಯವನು ಅನ್ಸುತ್ತೆ. ಏನೋ ಬಿಡಿ ಸದ್ಯ ಈಗ ಸ್ವಲ್ಪ ಮನಸ್ಸಿಗೆ ಖುಷಿಯಾಯ್ತು."
ನಾನವತ್ತು ಕಚೇರಿಗೆ ಹತ್ತು ನಿಮಿಷ ತಡ, ನನ್ನ ಎಡ-ಬಲದಲ್ಲಿ ಕುಳಿತು ಕೊಳ್ಳುವ ಸಹೋದ್ಯೋಗಿಗಳ ನಡುವೆ ಪುಂಖಾನುಪುಂಖವಾಗಿ ಹೀಗೆ ವಿಚಾರ ವಿನಿಮಯ ನಡೆಯುತ್ತಿತ್ತು. ಇವರಿಬ್ಬರು ಒಂದೇ ಊರಿನವರಲ್ಲ, ತೀರ ಹಳೆ ಪರಿಚಯದವರು ಅಲ್ಲ, ಸರಿ ಸುಮಾರು ಒಂದು ವರ್ಷದಿಂದ ಒಂದೇ ಸೂರಿನಡಿ ಕೆಲಸ ಮಾಡುತ್ತಿರುವುದರಿಂದ ಸ್ವಲ್ಪ ಜಾಸ್ತಿಯೆನ್ನುವಷ್ಟು ಆತ್ಮೀಯ ಗೆಳೆಯರು. ಇದೆಲ್ಲ ಯಾಕೆ ಹೇಳುತ್ತಿದ್ದೀನೆಂದು ಯೋಚಿಸುವಿರ, ಕಾರಣ ಇಷ್ಟೇ ಇವರಿಬ್ಬರು ಗೆಳೆತನದಲ್ಲಿ ಎಷ್ಟು ಹಳಬರೋ ಇವರಿಬ್ಬರ ಜೊತೆ ನನ್ನ ಗೆಳೆತನವು ಅಷ್ಟೆ ಹಳತು. ಆದರೆ ಈ ಶಾಂಭವಿ ಮೇಡಂ ಯಾರು? ಎಂಬುದು ನನ್ನ ಪಾಲಿಗೆ ಒಂದು ಯಕ್ಷ ಪ್ರಶ್ನೆಯಂತಾಗಿತ್ತು. ಇಬ್ಬರ ಮುಖದಲ್ಲೂ ಅದೆಂತಹುದೋ ಸಮಾಧಾನ, ತಮ್ಮ ಮನೆಯ ಮಗಳಿಗೆ ಕಷ್ಟ ಪಟ್ಟು ಹುಡುಗನ ಹುಡುಕಿ ಇನ್ನೇನು ಮದುವೆಗೆ ಸಿದ್ಧತೆ ಮಾಡಿಕೊಳ್ಳುವ ತರಾತುರಿಯಲ್ಲಿ ನನ್ನ ಈ ಇಬ್ಬರು ಸಹೋದ್ಯೋಗಿಗಳಿದ್ದಂತೆ ಕಂಡರು.
ನಾನು ಕುತೂಹಲ ತಡೆಯಲಾಗದೆ ಕೇಳಿದೆ "ಮುಕುಂದ ಯಾರು ಈ ಶಾಂಭವಿ ಮೇಡಂ", ಮುಕುಂದ ಕೂಡಲೇ "ಪ್ರಭು, ಇವನಿಗೆ ಶಾಂಭವಿ ಮೇಡಂ ಗೊತ್ತಿಲ್ಲ ನೋಡು" ಅಂದ. ನನಗೀಗ ಇನ್ನು ಕುತೂಹಲ ಹೆಚ್ಚಾಯಿತು ಪ್ರಭುವಿನ ಕಡೆ ತಿರುಗಿ ಕೇಳಿದೆ "ಯಾರೋ ಶಾಂಭವಿ ಮೇಡಂ". ಪ್ರಭು ಮಾತಿಗೆ ಶುರುವಿಟ್ಟ "ರಾಜು ಶಾಂಭವಿ ಮೇಡಂ ಗೊತ್ತಿಲ್ಲ ಅಂದ್ರೆ ಹೇಗೋ, ಎಷ್ಟು ಸಮಯದಿಂದ ಹುಡುಗನನ್ನು ಹುಡುಕುತ್ತಿದ್ದರು ಗೊತ್ತ, ಎಲ್ಲಿ ಜನ ಮಾರಾಯ ನೀನು, ಮುಕುಂದ ಇವನಿಗೆ ಏನು ಹೇಳೋದೋ?" ಅಂದ.
ನನ್ನ ಸಹನೆ ಮೀರಿತ್ತು "ಹೇಳೋ ಇಷ್ಟ ಇದ್ದರೆ ಹೇಳಿ, ಇಲ್ಲದಿದ್ದರೆ ಸುಮ್ಮನಿದ್ದು ಬಿಡಿ" ಅಂದೆ. ಮುಕುಂದ ಕೂಡಲೇ ಕೇಳಿದ "ರಾತ್ರಿ ೯:೩೦ ಕ್ಕೆ ಈ - ಟಿ. ವಿ ಯಲ್ಲಿ 'ಮುಕ್ತ ಮುಕ್ತ' ಧಾರವಾಹಿ ನೋಡಲ್ವೇನೋ?". ಒಂದು ಕಡೆ ನಗು ಇನ್ನೊಂದು ಕಡೆ ಸಿಟ್ಟು ಒತ್ತರಿಸಿ ಬಂದಿದ್ದು ಸುಳ್ಳಲ್ಲ. ಈ "ಶಾಂಭವಿ ಮೇಡಂ" ಮುಕ್ತ-ಮುಕ್ತ ಧಾರಾವಾಹಿಯ ಒಂದು ಪಾತ್ರವಂತೆ.
ಧಾರಾವಾಹಿಗಳು ಮತ್ತು ಧಾರಾವಾಹಿಯ ಪಾತ್ರಗಳು ನಮ್ಮ ನಡುವಲ್ಲೇ ನಡೆವ ಸನ್ನಿವೇಶಗಳು ಮತ್ತು ನಮ್ಮ ಮನೆಯ ಅವಿಭಾಜ್ಯ ಅಂಗಗಳೇನೋ ಎಂಬಂತೆ ಆಗಿ ಹೋಗಿದೆ, ನೋಡುವ ಪ್ರತಿಯೊಬ್ಬರೂ ಇದರಲ್ಲಿ ಅದೆಷ್ಟು ತಲ್ಲೀನರು ಅಂದರೆ ಒಂದು ದಿನವು ತಪ್ಪಿಸದೇ ನೋಡುತ್ತಾರೆ, ಅಕಸ್ಮಾತ್ ತಪ್ಪಿದರೆ ಏನೋ ಕಳೆದು ಕೊಂಡ ಅನುಭವ.
ಆಗ ನಾನು ದ್ವಿತೀಯ ವರ್ಷದ ಪದವಿ ಓದುತ್ತಿದ್ದೆ, ಎಂದಿನಂತೆ ಮಧ್ಯಾನ್ಹ ಕಾಲೇಜು ಮುಗಿಸಿ ಮನೆಗೆ ಬಂದು ಬಾಗಿಲು ತಟ್ಟಿದವನಿಗೆ ಬಾಗಿಲು ತೆರೆದು ಎದುರಾಗಿದ್ದು ನನ್ನ ಅಜ್ಜಿ, ಪ್ರತಿ ದಿನ ಕಾಲೇಜಿನಿಂದ ಬಂದವನಿಗೆ ಊಟ ಮಾಡ್ತೀಯ ಅಂತ ಕೇಳಿ, ಊಟ ಬಡಿಸುತ್ತಿದ್ದ ಅಜ್ಜಿ ಅವತ್ತು ಎಂದಿನಂತಿರಲಿಲ್ಲ, ಒಂದೇ ಸಮನೆ ಅಳು, ಏನಾಯ್ತು ಅಂದರೆ ಕಾರಣ ಹೇಳಲು ಸಾಧ್ಯವಾಗದಷ್ಟು ಜೋರಾಗಿ ಬಿಕ್ಕಿ ಬಿಕ್ಕಿ ಅಳಲಾರಂಭಿಸಿದರು. ನಾನು ದಿಕ್ಕೇ ತೋಚದಂತಾಗಿ ಕೇಳಿದೆ "ಏನಾಯ್ತು ಹೇಳಜ್ಜಿ". ಅಜ್ಜಿ ಅಳುತ್ತಲೇ ಶುರು ಮಾಡಿದರು "ಸುಮತಿಗೆ ಯಾರೋ ಚಾಕು ಹಾಕಿ ಬಿಟ್ಟರು, ಅವಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ, ಸಂಜೆ ೭ ಕ್ಕೆ ಬರ್ತಾರಲ್ಲ ಅದೇ ಡಾಕ್ಟ್ರು ಈಗಲೇ ಏನು ಹೇಳೋದಕ್ಕೆ ಆಗಲ್ಲ ಅಂದ್ರು, ಪಾಪಿ ಅವನಿಗೆ ಕೊಲೆ ಮಾಡ್ಲಿಕ್ಕೆ ಈ ಹುಡುಗೀನೆ ಬೇಕಿತ್ತಾ, ಅವಳು ಅದೆಷ್ಟು ನೊಂದಿದ್ದಾಳೆ ಈಗಾಗಲೇ" ನಾನು ಒಂದು ಕ್ಷಣ ಅವಕ್ಕಾದೆ, ಈಗ ಏನು ಮಾಡೋದು ಅಂತ ಯೋಚಿಸುವ ಮುನ್ನ ನೆನಪಾಗಿದ್ದೆಂದರೆ ಸುಮತಿ ಎಂಬ ಹೆಸರಿನವರು ನನಗೆ ತಿಳಿದ ಮಟ್ಟಿಗೆ ನಮ್ಮ ಕುಟುಂಬದಲ್ಲಿ ಅಥವಾ ನಮ್ಮ ಪರಿಚಯಸ್ಥರಲ್ಲಿ ಯಾರು ಇಲ್ಲ, ಕೊನೆಗೆ ಅಜ್ಜಿಗೆ ಮರು ಪ್ರಶ್ನೆ ಕೇಳಿದೆ ಅಂದ ಹಾಗೆ ಈ ಸುಮತಿ ಯಾರು?. ಈಗ ಅಜ್ಜಿಗೆ ಕೋಪ ಬಂದಿತ್ತು "ಬೇಕುಪ್ಪ ಸುಮತಿ ಗೊತ್ತಿಲ್ವ, ೨:೩೦ ಕ್ಕೆ ಧಾರವಾಹಿ ಅವಳು", ಮತ್ತೆ ನನಗೆ ಮಾತೆ ಹೊರಡಲಿಲ್ಲ.
ಹೀಗೆ ಒಮ್ಮೆ ನಮ್ಮ ಅಮ್ಮನ ಪರಿಚಯದವರೊಬ್ಬರು ಮನೆಗೆ ಬಂದವರು ಅಮ್ಮನ ಬಳಿ ಮಾತನಾಡುತ್ತಾ "ಮಗನಿಗೆ ಎಲ್ಲೂ ಹುಡುಗಿ ಸಿಗಲಿಲ್ಲ, ಯಾರಾದರು ಬಡವರ ಮನೆ ಹೆಣ್ಣಾದರು ಪರವಾಗಿಲ್ಲ ಒಳ್ಳೆಯವಳಾಗಿದ್ದರೆ ಸಾಕು, ನಿಮಗೆ ಎಲ್ಲಾದರು ಗೊತ್ತಿದ್ದರೆ ಹೇಳಿ" ಅಂದರು. ಒಳಮನೆಯಿಂದ ಬಂದ ಅಜ್ಜಿ ಕೂಡಲೇ "ಸಂಜೆ ೭:೩೦ ಕ್ಕೆ ಗುಪ್ತಗಾಮಿನಿಯಲ್ಲಿ ಬರ್ತಾಳಲ್ವ ಭಾವನ ಅವಳಿಗೂ ಹುಡುಗನ್ನ ನೋಡುತ್ತಿದ್ದಾರೆ, ನಂಗೆ ಚೆನ್ನಾಗಿ ಗೊತ್ತು ಅವಳು ತುಂಬಾ ಒಳ್ಳೆ ಹುಡುಗಿ ನಿಮ್ಮ ಮಗನಿಗೆ ಮದುವೆ ಮಾಡಿಕೊಳ್ಳುವುದಾದರೆ ನೋಡಿ" ಎಂದು ಒಂದೇ ಉಸಿರಿನಲ್ಲಿ ಹೇಳಿ ಮುಗಿಸಿದಾಗ ಅಮ್ಮನಿಗೂ, ನನಗು, ಮತ್ತು ಬಂದವರಿಗೂ ನಗು ತಡೆಯಲಾಗಿರಲಿಲ್ಲ.